ಬಸವಕಲ್ಯಾಣ | ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಪ್ರತಿಭಟನೆ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲಿ

ನೀಟ್ ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್ಐಒ) ಹಾಗೂ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ನೇತ್ರತ್ವದಲ್ಲಿ ಗುರುವಾರ ಬಸವಕಲ್ಯಾಣ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು. ನಗರದ ಮಹಾತ್ಮ ಗಾಂಧಿ ವೃತ್ತದಿಂದ ಆರಂಭವಾದ ಪ್ರತಿಭಟನಾ ರ್ಯಾಲಿ ಬಸವೇಶ್ವರ ವೃತ್ತದ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿ ಸಮಾವೇಶಗೊಂಡಿತು. ಬಳಿಕ ರಾಷ್ಟ್ರಪತಿಗಳ ಹೆಸರಿಗೆ ಬರೆದ […]